ಹೈದರಾಬಾದ್ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿ ಬಂಧನ.
Cnewstv.in / 06.06.2022 / ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹೈದರಾಬಾದ್ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿ ಬಂಧನ.
ಹೈದರಾಬಾದ್ : ಹೈದರಾಬಾದ್‌ನಲ್ಲಿ ಅಪ್ರಾಪ್ತೆಯ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಎಐಎಂಐಎಂ ಪಕ್ಷದ ಶಾಸಕರೊಬ್ಬರ ಪುತ್ರನೊಬ್ಬ ಭಾಗಿಯಾಗಿರುವುದನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಮುಚ್ಚಿ ಹಾಕುತ್ತಿದ್ದಾರೆ ಎಂದು ಹೈದರಾಬಾದ್‌ನ ಬಿಜೆಪಿ ಶಾಸಕ ರಘುನಂದನ್ ರಾವ್ ಆರೋಪಿಸಿದ್ದಾರೆ.
ಘಟನೆ ನಡೆದ ದಿನ ಅಪ್ರಾಪ್ತೆಯು ಆರೋಪಿಗಳೊಂದಿಗೆ ಸುತ್ತಾಡಿರುವ ಪ್ರಾಂತ್ಯಗಳಿಂದ ಪಡೆಯಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ರಘುನಂದನ್ ರಾವ್ ಬಿಡುಗಡೆ ಮಾಡಿದ್ದು, ಎಐಎಂಐಎಂ ಶಾಸಕರ ಪುತ್ರನೂ ಇದರಲ್ಲಿ ಭಾಗಿಯಾಗಿರುವುದು ಈ ವಿಡಿಯೋಗಳಿಂದ ತಿಳಿದುಬರುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೇರಿದ್ದು, 5ನೇ ಆರೋಪಿಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10057
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
2022-06-06