ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ…
Cnewstv.in / 06.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ…
ಬೆಂಗಳೂರು : ಬಿಜೆಪಿಯ ಬಹುನಿರೀಕ್ಷಿತ ಸಚಿವ ಸಂಪುಟ ಪುನರಚನೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದೇ ತಿಂಗಳು 16 ಮತ್ತು 17ರಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಈ ವೇಳೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಹಾಗೂ ಅದಕ್ಕಾಗಿ ಎಲ್ಲಾ ಸಿದ್ದತೆಗಳು ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ಇದೇ ತಿಂಗಳು 10 ರಂದು ರಾಜ್ಯಸಭೆ ಹಾಗೂ 13 ರಂದು ರಾಜ್ಯ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ ಹಾಗಾಗಿ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಈ ತಿಂಗಳ ಅಂತ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ನಡೆಯಲಿದೆ.
ಈ ಬಾರಿ ಸಚಿವ ಸಂಪುಟ ಸ್ಥಾನಕ್ಕೆ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳನ್ನು ಪರಿಹರಿಸಲು ಪಕ್ಷವು ನಿರ್ಧರಿಸಿದೆ ಹಾಗೂ ಹೊಸಬರಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುವುದು ಎನ್ನಲಾಗುತ್ತಿದೆ.
ಇದನ್ನು ಒದಿ : https://cnewstv.in/?p=10061
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ... 2022-06-06
Recent Comments