Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಆರ್ ಎಸ್ ಎಸ್ ಕಚೇರಿಗಳಿಗೆ ಹೆಚ್ಚಿನ ಭದ್ರತೆ – ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.
ಶಿವಮೊಗ್ಗ : ರಾಜ್ಯದ ಆರ್ ಎಸ್ ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್ ಎಸ್ ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಎರಡು ಹಾಗೂ ಕರ್ನಾಟಕದ ನಾಲ್ಕು ಆರ್ ಎಸ್ ಎಸ್ ಕಚೇರಿಗಳನ್ನು ದ್ವಂಸ ಗೊಳಿಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕಳಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ.
Recent Comments