ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ.
Cnewstv.in / 08.06.2022 / ಹೈದ್ರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ.
ಹೈದ್ರಾಬಾದ್ : ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರು ಜನ ಆರೋಪಿಗಳ ಪೈಕಿ ನಾಲ್ಕು ಜನ ಬಾಲಾರೋಪಿಗಳಾಗಿದ್ದು ಇಬ್ಬರು ವಯಸ್ಕರಾಗಿದ್ದರೆ. ಇದರಲ್ಲಿ ಆರನೇ ಬಾಲಾಪರಾಧಿ ಎಐಎಂಐಎಂ ಶಾಸಕನ ಪುತ್ರನಾಗಿದ್ದಾನೆ ಆತನನ್ನ ಸಹ ಪೊಲೀಸರು ಬಂಧಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಈ ಪ್ರಕರಣದಲ್ಲಿ ಅರೋಪಿಗಳವಿರುದ್ಧ ಐಪಿಸಿ ಸೆಕ್ಷನ್ 376 ಡಿ, 323, 366 ಹಾಗೂ ಫೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕೃತ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿದ ಆರೋಪದಲ್ಲಿ ಐಟಿ ಕಾಯ್ದೆಯ ಸೆಕ್ಷನ್ 67 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ವಿವಿ ಆನಂದರವರು, ಈ ಘಟನೆ ಸೂಕ್ಷ್ಮವಾಗಿದ್ದು, ಸಂತ್ರಸ್ತೆಯ ಹೇಳಿಕೆ ಸಾಕ್ಷ್ಯಾಧಾರಗಳು, ಸಿಸಿಡಿವಿ ದೃಶ್ಯಾವಳಿಗಳು ಎಲ್ಲಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆಯು ನಿಸ್ಪಕ್ಷಪಾತವಾಗಿ ನ್ಯಾಯವಾಗಿ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅರೋಪಿಗಳ ವಿರುದ್ದ ಕ್ರಮಕೈಗೊಳ್ಳದಂತೆ ಯಾವುದೇ ಹಿಂಜರಿಕೆ ಅಥವಾ ಒತ್ತಡವಿಲ್ಲ ಎಂದು ಹೇಳುತ್ತಾರೆ.
ಇದನ್ನು ಒದಿ : https://cnewstv.in/?p=10084
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಹೈದ್ರಾಬಾದ್ ಗ್ಯಾಂಗ್ ರೇಪ್ ಪ್ರಕರಣ : ಶಾಸಕರ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನ. 2022-06-08
Recent Comments