ಹಳೆ ವೈಷಮ್ಯ, ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ
Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಳೆ ವೈಷಮ್ಯ, ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ..
ಶಿವಮೊಗ್ಗ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹೊಸಮನೆಯ ದೊಡ್ಡಮ್ಮ ದೇವಸ್ಥಾನದ ಹತ್ತಿರ ಯುವಕನಿಗೆ ಇರಿದ ಘಟನೆ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನ ರೂಪೇಶ್ (29) ಎಂದು ಗುರುತಿಸಲಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ
ಸೋಮವಾರ ರಾತ್ರಿ ದರ್ಶನ್ ಹಾಗೂ ಆತನ ಸ್ನೇಹಿತರು ರೂಪೇಶ್ ನನ್ನು ಹೊಸಮನೆಗೆ ಮಾತನಾಡಬೇಕು ಎಂದು ಕರೆದು ಹಲ್ಲೆ ಮಾಡಿದ್ದಾರೆ.
ಗಾಯಗೊಂಡಿರುವ ರೂಪೇಶ್ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=10086
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಹಳೆ ವೈಷಮ್ಯ ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ 2022-06-08
Recent Comments