Breaking News

ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ.

Cnewstv.in / 08.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/- ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.500/- ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜೂ.25 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಮೊ.ಸಂ: 7022429440 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲ ರವಿ.ಎನ್ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10088

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*