Breaking News

ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು.

Cnewstv.in / 9.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿತ ಪ್ರಕರಣ : ವ್ಯಾಪಾರಿ ಸಾವು.

ಶಿವಮೊಗ್ಗ : ಗಾಂಧಿಬಜಾರಿನ ಬಟ್ಟೆ ಮಾರುಕಟ್ಟೆಯಲ್ಲಿ ಸೆಂಥಿಲ್ ಎಂಬ ವ್ಯಾಪಾರಿಗೆ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಗಾಂಧಿಬಜಾರ್ ನ ಚೋರ್ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಸಂಜೆ 7.30 ಸಮಯಕ್ಕೆ ಸಂತೋಷ್ ( ಜೋಗಿ ಸಂತು ) ಎಂಬಾತನು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರಿ ಸೆಂಥಿಲ್ ಗೆ ಚಾಕುವಿನಿಂದ ಎದೆ, ಹೊಟ್ಟೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದಾನೆ.

ಈ ಘಟನೆಗೆ ಸಂಬಂಧಿಸಿದಂತೆ ಜೋಗಿ ಸಂತು ಹಾಗೂ ನಾಲ್ವರ ವಿರುದ್ಧ ದೊಡ್ಡಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದರು.

ಇದನ್ನು ಒದಿ : https://cnewstv.in/?p=10109

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*