ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ.. ಮತ್ತೆ ಮಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ..
Cnewstv.in / 10.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ.. ಮತ್ತೆ ಮಸ್ಕ್ ಕಡ್ಡಾಯ.. ಸರ್ಕಾರದಿಂದ ಹೊಸ ಮಾರ್ಗಸೂಚಿ..
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,177 ಕ್ಕೆ ಏರಿಕೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲೆ 3,061 ಜನ ಸೋಂಕಿತರಿದ್ದಾರೆ. ಒಟ್ಟು ಪಾಸಿಟಿವಿಟಿ ದರ 2.14 % ಅಗಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದಿನಿಂದ ಮಾಸ್ಕ್ ಕಡ್ಡಾಯ ಮಾಡಿದೆ ಹಾಗೂ ಸರ್ಕಾರ ಹೊಸ ಮಾರ್ಗಸೂಚಿ ನೀಡಿದೆ.
ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ..
* ಇಂದಿನಿಂದ ಸಾರ್ವಜನಿಕಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು.
* ಸ್ವಂತ ವಾಹನ ಅಥವಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಮಾಸ್ಕ್ ಕಡ್ಡಾಯ.
* ಥಿಯೇಟರ್, ಪಬ್, ಹೋಟೆಲ್, ರೆಸ್ಟೋರೆಂಟ್, ಹಾಸ್ಟೆಲ್, ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯ.
* ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆ ಇದ್ದರೆ ಆದ್ಯತೆ ಮೇಲೆ ಪರೀಕ್ಷೆಗೆ ಒಳಪಡಿಸುವುದು ಹಾಗೂ ಫಲಿತಾಂಶ ಲಭ್ಯವಾಗುವ ವರೆಗೂ ಮನೆಯಲ್ಲೇ ಇರಬೇಕು.
* ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.
* ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು. ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ
ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.
ಇದನ್ನು ಒದಿ : https://cnewstv.in/?p=10123
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ. 2022-06-10
Recent Comments