ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು
Cnewstv.in / 13.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು
ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆ ಬಿಸಿ ವಾಹನ ಸವಾರರಿಗೆ ತಟ್ಟಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ನೀಡಿದ್ದನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಗೆ ಸಾವಿರಾರು ಜನರು ಆಗಮಿಸಿದ್ದು, ಕಾಂಗ್ರೆಸ್ ನವರ ಪ್ರತಿಭಟನೆ ಲಾಲ್ ಬಾಗ್ ಗೇಟ್ ನಿಂದ ಆರಂಭವಾಗುತ್ತಿದ್ದಂತೆ, ಶಾಂತಿನಗರ ಸುತ್ತಮುತ್ತಲು ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದೆಡೆ ಆಂಬುಲೆನ್ಸ್ ವಾಹನಗಳ ಮಧ್ಯ ಸಿಲುಕಿದ ಘಟನೆ ನಡೆದಿದೆ. ಇನ್ನು ಪ್ರತಿಭಟನೆಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=10131
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಕಾಂಗ್ರೆಸ್ ಪ್ರತಿಭಟನೆ : ಟ್ರಾಫಿಕ್ ಜಾಮ್ ನಿಂದ ಪರದಾಡುತ್ತಿರುವ ವಾಹನ ಸವಾರರು 2022-06-13
Recent Comments