Breaking News

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್, ಕಾಂಗ್ರೆಸ್ ಕಚೇರಿ ಎದುರು ನಾಯಕರ ತೀವ್ರ ಪ್ರತಿಭಟನೆ.

Cnewstv.in / 15.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿಗೆ 3ನೇ ದಿನವೂ ED ಡ್ರಿಲ್, ಕಾಂಗ್ರೆಸ್ ಕಚೇರಿ ಎದುರು ನಾಯಕರ ತೀವ್ರ ಪ್ರತಿಭಟನೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ 11.35ಕ್ಕೆ ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ ಸಿಆರ್ ಪಿಎಫ್ ಭದ್ರತಾ ಬೆಂಗಾವಲಿನೊಂದಿಗೆ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ವಿಚಾರಣೆಗ ಹಾಜರಾದರು. ಈ ವೇಳೆ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದರು.

ರಾಹುಲ್ ಗಾಂಧಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಇತ್ತ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=10142

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*