ರಾಜಭವನ ಚಲೋ ಪ್ರತಿಭಟನೆ ರ‍್ಯಾಲಿ : ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ
Cnewstv.in / 16.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜಭವನ ಚಲೋ ಪ್ರತಿಭಟನೆ ರ‍್ಯಾಲಿ : ಸಿದ್ದರಾಮಯ್ಯ, ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಈ ವೇಳೆ ಪ್ರತಿಭಟನಾನಿರತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ರಾಹುಲ್ ಗಾಂಧಿಯವರ ವಿಚಾರಣೆ ನಡೆಯುತ್ತಿತ್ತು. ಕೆಪಿಸಿಸಿ ಕಚೇರಿಯಿಂದ ಬೆಳಿಗ್ಗೆ 9.39 ಕ್ಕೆ ಕಾಂಗ್ರೆಸ್ ಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ಕಾಂಗ್ರೆಸ್ ನಾಯಕರು ತಯಾರಾಗಿದ್ದರು ಆದರೆ ಕಾರ್ಯಕರ್ತರು ತಡವಾಗಿ ಬಂದ ಕಾರಣ ಪ್ರತಿಭಟನಾ ಮೆರವಣಿಗೆಯ 11 ಗಂಟೆಗೆ ಆರಂಭ ಮಾಡಲಾಯಿತು.
ಪ್ರತಿಭಟನಾ ಮೆರವಣಿಗೆ ಸಾಗುವ ಕ್ವೀನ್ಸ್ ರಸ್ತೆಯನ್ನು ಪೊಲೀಸರು ಬಂದ್ ಮಾಡಿದರು. ಮೆರವಣಿಗೆ ಇಂಡಿಯನ್ ಎಕ್ಸ್ಪ್ರೆಸ್ ಬಳಿ ಬಂದ ಕೂಡಲೇ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿ ಪರಮೇಶ್ವರ್, ಹೆಚ್ ಕೆ ಜಾರ್ಜ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾರಿಸ್ ಮಹಮದ್ ನಲಪಾಡ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=10160
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಡಿ ಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ ರಾಜಭವನ ಚಲೋ ಪ್ರತಿಭಟನೆ ರ‍್ಯಾಲಿ : ಸಿದ್ದರಾಮಯ್ಯ 2022-06-16
Recent Comments