ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ.
Cnewstv.in / 16.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ.
ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ದಿನಾಂಕ: 22.06.2022 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10165
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರ. 2022-06-16
Recent Comments