ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ.
Cnewstv.in / 17.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – ಕಾರ್ಯಕರ್ತರ ಬಂಧನ.
ಶಿವಮೊಗ್ಗ : ಜಾರಿ ನಿರ್ದೇಶನಾಲಯವನ್ನು ರಾಜಕೀಯ ಕಾರಣಕ್ಕಾಗಿ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರೋಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದರೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಛೇರಿಯ ಒಳಗೆ ಹೋಗುವುದನ್ನು ನಿರಾಕರಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ನೂಕಾಟ ಮತ್ತು ತಲ್ಲಾಟ ವಾಯಿತು. ಕೆಲ ಕಾರ್ಯಕರ್ತರು ಪೋಲೀಸ್ ಬಸ್ಸ್ ಗೆ ಅಡ್ಡ ಮಲಗಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಪಾಲಿಕೆಯ ಸದಸ್ಯ ಹೆಚ್.ಸಿ ಯೋಗೇಶ್, ಯಮುನಾ ರಂಗೇಗೌಡ, ಅನಿತಾ ಕುಮಾರಿ, ಕೆ ರಂಗನಾಥ್, ವಿಜಯ್ ಕುಮಾರ್ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. ..
Recent Comments