Breaking News

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ಪಾಸ್‌. ಟಾಪ್ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ.

Cnewstv.in / 18.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ಪಾಸ್‌. ಟಾಪ್ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ.

ಬೆಂಗಳೂರು : ರಾಜ್ಯದ‌ 21-22 ನೇ ಸಾಲಿನ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದು, ಹೆಚ್ಚು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ‌.68.72ರಷ್ಟು ಬಾಲಕಿಯರು ಮತ್ತು ಶೇ. 55.22ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ,ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ ನಾಲ್ಕನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಕಲಾ ವಿಭಾಗದಲ್ಲಿ 2,28,167 ಮಂದಿ, ವಾಣಿಜ್ಯ ವಿಭಾಗದಲ್ಲಿ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.72.53 ವಿಜ್ಞಾನ ವಿದ್ಯಾರ್ಥಿಗಳು, ಶೇ.64.97 ವಾಣಿಜ್ಯ, ಶೇ.48.71 ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಇದನ್ನು ಒದಿ : https://cnewstv.in/?p=10187

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*