ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ.
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್, 64 ಕಾಲೇಜುಗಳಿಗೆ ರಜೆ.
ಬೆಂಗಳೂರು : ರಾಜ್ಯಕ್ಕೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ.
ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದು ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಈಗಾಗಲೇ ದೇಶಾದ್ಯಂತ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ಹಲವು ಸಂಘಟನೆಗಳು ಭಾರತ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಮೋದಿಯವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸುಮಾರು 10 ಸಾವಿರಕ್ಕೂ ಹೆಚ್ಚು ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಅಂಬೇಡ್ಕರ್ ಸ್ಕೂಲ್ ಎಕ್ಸಾಮಿನರ್ ಉದ್ಘಾಟನೆ ಹಿನ್ನೆಲೆ ವಿವಿ ಸಂಯೋಜನೆಗೆ ಒಳಪಡುವ 64 ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವಿವಿ ಕುಲಸಚಿವರು ಸುತ್ತೋಲೆ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಯವರು, ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ಇದನ್ನು ಒದಿ : https://cnewstv.in/?p=10190
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
64 ಕಾಲೇಜುಗಳಿಗೆ ರಜೆ. ಮೋದಿ ಆಗಮನ : ಬೆಂಗಳೂರಿನಲ್ಲಿ ಫುಲ್ ಅಲರ್ಟ್ 2022-06-20
Recent Comments