Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ..
ನವದೆಹಲಿ : ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ..
ಮೋದಿ ಟ್ವೀಟ್….
ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು.
ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ.
ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ.
ಇದನ್ನು ಒದಿ : https://cnewstv.in/?p=10192
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Recent Comments