ಅಗ್ನಿಪಥ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, 40 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಗ್ನಿಪಥ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, 40 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ.
ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೈಲು ತಡೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು.
ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರೈಲ್ವೆ ನಿಲ್ದಾಣದ ಮುಂಭಾಗ ಹೋಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.
ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿರುವ ಯಥಾಸ್ಥಿತಿಯಲ್ಲಿ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ಈ ಯೋಜನೆ ಅವೈಜ್ಞಾನಿಕವಾಗಿದ್ದು, ಯುವಕರ ಭವಿಷ್ಯದ ಜೊತೆ ಕೇಂದ್ರದ ಬಿಜೆಪಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ H.P. ಗಿರೀಶ್, ಮಾಜಿ ವಿಧಾನ ಪರಿಷತ್ ಸದಸ್ಯ R ಪ್ರಸನ್ನಕುಮಾರ್, ರಂಗನಾಥ್ ಕೆ. ಕೆ.ಬಿ ಪ್ರಸನ್ನಕುಮಾರ್, ಪ್ರವೀಣ್ ಕುಮಾರ್, ಬಿ.ಲೋಕೇಶ್, ವಿನೋದ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.