Breaking News

ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ.

Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರಿಗೆ ಆಗಮಿಸಿದ ಮೋದಿ. ಗಣ್ಯರಿಂದ ಸ್ವಾಗತ. ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಕೈಬೀಸಿದ ಮೋದಿ.

ಬೆಂಗಳೂರು : ಇಂದು ಬೆಂಗಳೂರಿನ ಯಲಹಂಕಕ್ಕೆ ವಿಶೇಷ ವಿಮಾನದ ಮೂಲಕ ಅಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವರಾದ ಅರಗಜ್ಞಾನೇಂದ್ರ ಸ್ವಾಗತಿಸಿದರು.

ಮೇಕ್ರಿ ಸರ್ಕಲ್ ಹತ್ತಿರ, ರಸ್ತೆ ಪಕ್ಷದಲ್ಲಿ ಮೋದಿಯವರನ್ನು ನೋಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಳಿಗ್ಗೆಯಿಂದಲೇ ಕಾಯುತ್ತಿದ್ದರು. ಅವರನ್ನು ನೋಡಿ ಕಾರು ನಿಲ್ಲಿಸಿ ಇಳಿದು ಮೋದಿಯವರು ಕೈ ಬೀಸಿದ್ದಾರೆ.

ಇಂದು ಬೆಂಗಳೂರಿನಲ್ಲಿ 27 ಸಾವಿರ ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಂತರ ಸಂಜೆ ಮೈಸೂರನ್ನು ತಲುಪಲಿದ್ದು, ನಾಳೆ ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನು ಒದಿ : https://cnewstv.in/?p=10198

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*