ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ.
Cnewstv.in / 20.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ.
ಶಿವಮೊಗ್ಗ : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ “ಕಾಯಕಕಿರಣ” ಹಾಗೂ “ಸ್ವಸಹಾಯ ಸಂಘಗಳಿಗೆ ಉತ್ತೇಜನ” ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪ್ರವರ್ಗ 3ಬಿ ವರ್ಗಕ್ಕೆ ಸೇರಿದವರಾಗಿದ್ದು, ಆದಾಯ ಮಿತಿ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳ ಒಳಗಿರಬೇಕು.
ಕಾಯಕಕಿರಣ ಯೋಜನೆಯಡಿ ವೃತ್ತಿ ಕಸಬುದಾರರು ಹಾಗೂ ಕುಶಲಕರ್ಮಿಗಳಿಗೆ ಆರ್ಥಿಕ ಚಟುವಟಿಕೆಗಾಗಿ ಗರಿಷ್ಠ ರೂ. 1.00 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುವುದು ಹಾಗೂ ಸ್ವಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಗರಿಷ್ಠ 15 ಸದಸ್ಯರಿಗೆ ತಲಾ ರೂ. 5000/-ಗಳ ಸಹಾಯಧನ ಹಾಗೂ ರೂ. 10000/-ಗಳ ಸಾಲವನ್ನು ಶೇ.4 ರಷ್ಟ ಬಡ್ಡಿದರದಲ್ಲಿ ಪ್ರತಿ ಗುಂಪಿಗೆ ರೂ. 75000/- ಸಹಾಯಧನ ಹಾಗೂ ರೂ. 1.50ಲಕ್ಷ ಸಾಲ ಒಟ್ಟು ರೂ. 2.25 ಲಕ್ಷ ನೀಡಲಾಗುವುದು.
ಆಸಕ್ತ ಫಲಾಪೇಕ್ಷಿಗಳು www.kvldcl.karnataka.gov.in ವೆಬ್‍ಸೈಟ್‍ನಿಂದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ದಿ: 28/07/2022 ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕ ವೀ ಲಿಂ ಅ.ನಿ ದೂ.ಸಂ.: 08182-229634/080-22865522 ಗಳನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=10204
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಸಾಲ ಮತ್ತು ಸಹಾಯಧನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ. 2022-06-20
Recent Comments