ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ
Cnewstv.in / 20.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ – ಪ್ರಧಾನಿ ಮೋದಿ
ಬೆಂಗಳೂರು : ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಹೇಳಿದ್ದಾರೆ.
ಇಂದು ಬೆಗಳೂರಿನಲ್ಲಿ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮಗಳ ನಂತರ ಕೊಮ್ಮಘಟ್ಟದಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಮ್ಮ ಕೆಲವು ಕ್ರಮಗಳು ಪ್ರಸ್ತುತ ದಿನಗಳಲ್ಲಿ ಕಹಿಯಾಗಿ ಕಾಣಿಸಬಹುದು. ಆದರೆ, ಅವು ಮುಂದಿನ ದಿನಗಳಲ್ಲಿ ಫಲ ನೀಡುತ್ತವೆ” ಎಂದು ತಿಳಿಸಿದರು.
ಸರ್ಕಾರಿ ವಲಯದಷ್ಟೇ ಖಾಸಗಿ ಕ್ಷೇತ್ರವೂ ಮುಖ್ಯವಾಗಿದೆ ಎಂದ ಪ್ರಧಾನಿ, ಇಬ್ಬರಿಗೂ ಸಮಾನ ಅವಕಾಶಗಳಿವೆ. “ಆದರೆ, ಜನರ ಮನಸ್ಥಿತಿ ಬದಲಾಗಿಲ್ಲ, ಅವರು ಖಾಸಗಿ ಉದ್ಯಮಗಳ ಬಗ್ಗೆ ಅಷ್ಟು ಚೆನ್ನಾಗಿ ಮಾತನಾಡುವುದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.
ಬೆಂಗಳೂರಿಗರ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧರಾಗಿದ್ಧೇವೆ. ನಲವತ್ತು ವರ್ಷ ಚರ್ಚೆಯಲ್ಲಿದ್ದ ಸಬ್ ಅರ್ಬನ್ ರೈಲು ಯೋಜನೆ ಆರಂಭಿಸುವ ಪುಣ್ಯ ನಮಗೆ ಸಿಕ್ಕಿದೆ ಎಂದರು.
ಬೆಂಗಳೂರು ಕನಸುಗಳ ನಗರ. ಅಭಿವೃದ್ಧಿಯೇ ಬೆಂಗಳೂರು ಯುವ ಜನತೆ ಕನಸಾಗಿದೆ. ಸರ್ಕಾರದ ನೆರವು ಸಿಕ್ಕರೆ ಬೆಂಗಳೂರಿನ ಯುವಕರು ಏನನ್ನು ಬೇಕಾದರೂ ಸಾಧಿಸುತ್ತಾರೆ. ಇಲ್ಲಿ ಅಂತಹ ಉದ್ಯಮಶೀಲತೆಯ ಶಕ್ತಿ ಇದೆ. ಬೆಂಗಳೂರು ನಗರ ಆತ್ಮನಿರ್ಭರ್ ಭಾರತ್ ಶಕ್ತಿಗೆ ಪ್ರೇರಣೆ ನೀಡಿದೆ ಎಂದು ಮೋದಿ ಹೇಳಿದರು.
ಇದನ್ನು ಒದಿ : https://cnewstv.in/?p=10206
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಅಗ್ನಿಪಥ್ ಯೋಜನೆ : ಸರ್ಕಾರದ ಕೆಲವು ಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ - ಪ್ರಧಾನಿ ಮೋದಿ 2022-06-20