Breaking News

ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು

Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಷ್ಟ್ರಪತಿ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ನಾಯಕಿ, ಮಾಜಿ ಗವರ್ನರ್ ದ್ರೌಪದಿ ಮುರ್ಮು.

ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.‌

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ 64 ವರ್ಷದ ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ರನ್ನು ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ ಎಂದರು.

ಜಾರ್ಖಂಡ್‌ನ ಮೊದಲ ಮಹಿಳಾ ಗವರ್ನರ್ ದ್ರೌಪದಿ ಮುರ್ಮು ಕೌನ್ಸಿಲರ್ ಆಗಿ ತಮ್ಮ ರಾಜಕೀಯ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದರು, 2017 ರ ಅಧ್ಯಕ್ಷೀಯ ಚುನಾವಣೆಯ ಮೊದಲು ಈ ಹುದ್ದೆಗೆ ಪ್ರಬಲ ಸ್ಪರ್ಧಿಯಾಗಿದ್ದರು. ಆದರೆ ಈ ಸಂದರ್ಭದಲ್ಲಿ ಅಂದಿನ ಬಿಹಾರ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಈ ಹುದ್ದೆಗೆ ಸರ್ಕಾರದ ಅಭ್ಯರ್ಥಿ ಎಂದು ಹೆಸರಿಸಲಾಯಿತು.

ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೆಸರಿಸಲಾಗಿರುವ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಅಯ್ಕೆಯಾದರೆ ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ.‌ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ.

ಜುಲೈ 18 ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ನಾಮಪತ್ರ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ.

ಇದನ್ನು ಒದಿ : https://cnewstv.in/?p=10226

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*