Breaking News

ಅಸ್ಸಾಂ ನಲ್ಲಿ ಮುಂದುವರೆದ ಪ್ರವಾಹ ಪರಿಸ್ಥಿತಿ, ಸಾವಿನ ಸಂಖ್ಯೆ 82 ಕ್ಕೆ ಏರಿಕೆ.

Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಸ್ಸಾಂ ನಲ್ಲಿ ಮುಂದುವರೆದ ಪ್ರವಾಹ ಪರಿಸ್ಥಿತಿ, ಸಾವಿರ ಸಂಖ್ಯೆ 82 ಕ್ಕೆ ಏರಿಕೆ.

ನವದೆಹಲಿ : ಅಸ್ಸಾಂನಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಸಾವಿನ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. 4 ಲಕ್ಷಕ್ಕೂ ಹೆಚ್ಚು ಸಂತ್ರಸ್ತರಾಗಿದ್ದಾರೆ.

ಅಸ್ಸಾಂ ರಾಜ್ಯ ಪ್ರವಾಹದಿಂದ ಎರಡು ದ್ವೀಪಗಳಾಗಿ ಪರಿವರ್ತನೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದ ಮೃತಪಡುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ನೆನ್ನೆ ಕೂಡ 11 ಮಂದಿ ಮೃತಪಟ್ಟು, 7 ಮಂದಿ ನಾಪತ್ತೆಯಾಗಿದ್ದಾರೆ.

ಬ್ರಹ್ಮಪುತ್ರ, ಬರಾಕ್‌ ನದಿಗಳು ಹಾಗೂ ಇವುಗಳ ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, 48 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಎನ್‌ಡಿಆರ್‌ಎಫ್ ತಂಡವು ಭುವನೇಶ್ವರದಿಂದ ನೆನ್ನೆ ಕಛಾರ್‌ಗೆ ಧಾವಿಸಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ASDMA) ಮಾಹಿತಿ ಪ್ರಕಾರ, 20 ಜಿಲ್ಲೆಗಳಲ್ಲಿ 1,97,248 ಇದ್ದ ಸಂತ್ರಸ್ತರ ಸಂಖ್ಯೆ ಮಂಗಳವಾರಕ್ಕೆ 26 ಜಿಲ್ಲೆಗಳಲ್ಲಿ ಪೀಡಿತ ಜನರ ಸಂಖ್ಯೆ 4,03,352 ಕ್ಕೆ ತಲುಪಿದೆ. ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಮನೆ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ.

ಇನ್ನೂ ಕೆಲವು ದಿನಗಳ ಕಾಲ ಅಸ್ಸಾಂನಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಗುವಾಹಾಟಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಮಧ್ಯ ಅಸ್ಸಾಂನ ನಾಗಾಂವ್‌ನಲ್ಲಿ ಕೊಚ್ಚಿಹೋಗಿದ್ದ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಪೇದೆಯೋರ್ವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿರುವ 233 ಕ್ಯಾಂಪ್‌ಗ್ಳ ಪೈಕಿ 42 ಸಂಪೂರ್ಣವಾಗಿ ಜಲಾವೃತಗೊಂಡಿವೆ. 8 ಪ್ರಾಣಿಗಳು ಪ್ರವಾಹದಲ್ಲಿ ಮುಳುಗಿ ಮೃತಪಟ್ಟಿದ್ದರೆ, 12 ಪ್ರಾಣಿಗಳನ್ನು ರಕ್ಷಿಸಲಾಗಿದೆ.

ಇದನ್ನು ಒದಿ : https://cnewstv.in/?p=10229

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*