Breaking News

ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ : ಸಾವಿನ ಸಂಖ್ಯೆ 920ಕ್ಕೆ ಏರಿಕೆ, 600 ಮಂದಿಗೆ ಗಾಯ.

Cnewstv.in / 22.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ : ಸಾವಿನ ಸಂಖ್ಯೆ 920ಕ್ಕೆ ಏರಿಕೆ, 600 ಮಂದಿಗೆ ಗಾಯ.

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಬುಧವಾರ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 920ಮಂದಿ ಮೃತಪಟ್ಟಿದ್ದಾರೆ ಮತ್ತು 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ಹೇಳಿದ್ದಾರೆ.

ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿವೆ. ಈ ಭಾಗದಲ್ಲಿ ಕನಿಷ್ಠ 920 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. 600ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಾಲಿಬಾನ್ ಆಡಳಿತದಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಸೀಮ್ ಹಕ್ಕಾನಿ ತಿಳಿಸಿದ್ದಾರೆ.

ಪೂರ್ವದ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್‌ಗಳಲ್ಲಿ ಕೂಡ ಅಪಾರ ಪ್ರಮಾಣದ ಸಾವು ನೋವುಗಳು ವರದಿಯಾಗಿವೆ. ಆಗ್ನೇಯ ಭಾಗದ ನಗರ ಖೋಸ್ಟ್‌ನಿಂದ ಸುಮಾರು 44 ಕಿಮೀ ದೂರದಲ್ಲಿ ಹಾಗೂ 51 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದೆ. ಖೋಸ್ಟ್‌ನಲ್ಲಿ ಕನಿಷ್ಠ 25 ಮಂದಿ ಬಲಿಯಾಗಿದ್ದಾರೆ. ನಂಗರ್ಹಾರ್ ಪ್ರಾಂತ್ಯದಲ್ಲಿ ಕೂಡ ಐವರು ಮೃತಪಟ್ಟಿರುವುದು ವರದಿಯಾಗಿದೆ. ಅಪಾರ ಪ್ರಮಾಣದ ಕಟ್ಟಡಗಳು ಧರೆಗುರುಳಿವೆ.

ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಭಾರತದ ಭಾಗಗಳವರೆಗೆ ಸುಮಾರು 500 ಕಿಮೀ ಉದ್ದಕ್ಕೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ಗಳಲ್ಲಿ ಕೂಡ ಭೂಮಿ ನಡುಗಿದ ಅನುಭವವಾಗಿದೆ. ಪಾಕಿಸ್ತಾನದಲ್ಲಿ ಕೂಡ ತೀವ್ರತೆ ಜೋರಾಗಿತ್ತು. ಆದರೆ ಇದುವರೆಗೂ ಸಾವು- ನೋವು ಸಂಭವಿಸಿರುವುದು ವರದಿಯಾಗಿಲ್ಲ.

ಇದನ್ನು ಒದಿ : https://cnewstv.in/?p=10232

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*