Breaking News

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ, ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ – ಸಿದ್ದರಾಮಯ್ಯ.

Cnewstv.in / 23.06.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ,
ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ – ಸಿದ್ದರಾಮಯ್ಯ.

ಮೈಸೂರು : ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿರುವುದು ”ಸಾಮಾಜಿಕ ನ್ಯಾಯವೂ ಅಲ್ಲ, ವಿಶೇಷವೂ ಅಲ್ಲ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಆ ರೀತಿ ಇದ್ದರೆ ಆರ್ ಎಸ್ ಎಸ್ ಮುಖ್ಯ ಸರಸಂಘ ಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ಭಾಗವತ್ ಸ್ಥಾನಕ್ಕೆ ದ್ರೌಪದಿ ಮುರ್ಮುರಂತಹ ಮಹಿಳೆಯನ್ನು ತರಲಿ. ಆಕೆ ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲೆ ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಅಂತಹ ಕೆಲಸ ಮಾಡಲು ಇವರು ಬಿಡುವುದಿಲ್ಲ.ಹಿಂದೆ ರಾಜೇಂದ್ರ ಪ್ರಸಾದ್ ಅವರು ಮಾಡಿದಂತೆ ಕೆಲಸ ಮಾಡಲು ಆಗುತ್ತದಾ? ರಾಮನಾಥ್ ಕೋವಿಂದ್ ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು ? ಇದು ಅವರಂತೆ ನಾಮಕವಾಸ್ಥೆಗೆ ಮಾಡುತ್ತಿದ್ದಾರೆ ಎಂದರು.

ಇದನ್ನು ಒದಿ : https://cnewstv.in/?p=10239

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*