Breaking News

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ..

Cnewstv.in / 23.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ..

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.

ಇಷ್ಟು ದಿನ ರಾಜಕೀಯ ಮುಖಂಡರು, ಉದ್ಯಮಿಗಳು, ಅಧಿಕಾರಿಗಳ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದರು ಆದರೆ ಇಂದು ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ನಗರದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇಖಾ ಯೂನಿವರ್ಸಿಟಿ, ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಸೇರಿದಂತೆ 45 ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.

ಸರ್ಕಾರದ ನಿಯಮಾವಳಿಗಳನ್ನು ಮೀರಿ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಶುಲ್ಕವನ್ನು ಸಂಗ್ರಹಿಸಿ, ಸೀಟುಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲದೆ ಕಾಲೇಜು ಆಡಳಿತ ಮಂಡಳಿಯ ಸದಸ್ಯರ ಮನೆಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಇದನ್ನು ಒದಿ : https://cnewstv.in/?p=10241

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*