Breaking News

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ.

Cnewstv.in / 23.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ.

ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆಯ ಹಾಗೂ 50 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಲಿಂಗರಾಜು ಎಂಬ 18 ವರ್ಷದ ವ್ಯಕ್ತಿಯು‌ 6 ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ ಚಾಕಲೇಟ್ ಕೊಡುತ್ತೇನೆ ಎಂದು ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಆಗಿನ ತನಿಖಾಧಿಕಾರಿಗಳಾದ ಶ್ರೀ ಯೋಗೇಶ್, ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ರವರು ಸದರಿ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿ ಲಿಂಗರಾಜ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಮಾನ್ಯ Addl District and Sessions Judge, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ನ್ಯಾಯಾಧೀಶರು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ಎಂದು ಆದೇಶ ನೀಡಿರುತ್ತಾರೆ.

ಇದನ್ನು ಒದಿ : https://cnewstv.in/?p=10244

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*