SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್…ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ..
Cnewstv.in / 25.06.2022 / ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್…ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ..
ನವದೆಹಲಿ : ಕೇರಳದ ತಿರುವನಂತಪುರಂನ SFI ಸಂಘಟನೆಯ ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.
ಕೇರಳದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ಸುಷ್ಮಾ ಅರಣ್ಯ ವಲಯದ ಬಗ್ಗೆ ರಾಹುಲ್ ಮೌನವಹಿಸಿದ್ದಾರೆ ಎಂದು ಆರೋಪಿಸಿ SFI ಕಾರ್ಯಕರ್ತರು ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯ್ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸಲು ಹಕ್ಕಿದೆ. ಆದರೆ ಅದು ಮಿತಿ ಮೀರಬಾರದು ಅದೊಂದು ತಪ್ಪು ಪ್ರವೃತ್ತಿಯಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸಂಸದ ರಾಹುಲ್ ಗಾಂಧಿ ವಯನಾಡ್ ಕಚೇರಿ ಧ್ವಂಸ ಆಗುವಾಗ ಸುಮಾರು 80-100 ಕಾರ್ಯಕರ್ತರು ಇದ್ದರು. ಸದ್ಯಕ್ಕೆ ಅವರಲ್ಲಿ ಎಂಟು ಮಂದಿ ಬಂಧನದಲ್ಲಿದ್ದಾರೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10260
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
SFI ಕಾರ್ಯಕರ್ತರಿಂದ ರಾಹುಲ್ ಗಾಂಧಿ ಕಚೇರಿಗೆ ಮುತ್ತಿಗೆ..ಪೀಠೋಪಕರಣಗಳು ಪೀಸ್...ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.. 2022-06-25