Breaking News

ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ??

Cnewstv.in / 26.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ??

ಶಿವಮೊಗ್ಗ : ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥಗೊಂಡ ಘಟನೆ ಇಂದು ಸಂಜೆ ನಡೆದಿದೆ‌.

ಶಿವಮೊಗ್ಗದ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಇಂದು ಸಂಜೆ ಜ್ವರ ಕೆಮ್ಮು ನೆಗಡಿ ವಿಚಾರವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಆಂಟಿಬಯೋಟಿಕ್ ತೆಗೆದುಕೊಂಡ ಕೂಡಲೇ ಅಸ್ವಸ್ಥಗೊಂಡಿದ್ದಾರೆ.

ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಂತೆಯೇ ಮಕ್ಕಳು ಚಳಿಯಿಂದ ನಡುಗತೊಡಗಿದ್ದಾರೆ. ಇಂಜೆಕ್ಷನ್ ಅಡ್ಡ ಪರಿಣಾಮದಿಂದಾಗಿ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

ಘಟನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ 4 ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಎಲ್ಲಾ ಮಕ್ಕಳ ಆರೋಗ್ಯ ಸ್ಥಿರವಾಗಿದೆ.

ಮಕ್ಕಳು ಅಸ್ವಸ್ಥಗೊಂಡ ವಿಷಯ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ವೇಘರಾಜ್ ಅಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಹಾಗೂ ಈ ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನು ಒದಿ : https://cnewstv.in/?p=10265

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*