ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ.
Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ.
ಕೊಡಗು : ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದೆ. ಈ ಮೂಲಕ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೆ ಬಾರಿಯಾಗಿದ್ದು, ಜನರಿಗೆ ಆತಂಕ ಹೆಚ್ಚಾಗಿದೆ.
ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ, ವನಚಲ್, ಕರಿಕೆ, ಚೆಯ್ಯಂಡಾಣೆ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದೆ.
ಮನೆಯಲ್ಲಿದ್ದ ಪಾತ್ರೆಗಳು, ವಸ್ತುಗಳು ಅಲುಗಾಡಿದ್ದು, ಭಯಭೀತರಾದ ಜನ ಕೆಲ ಕಾಲ ರಸ್ತೆಗೆ ಬಂದು ನಿಲ್ಲುವಂತಾಗಿತ್ತು. ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿದ್ದವು.
ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, 5 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ವಿಷಯವನ್ನು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಗಮನಕ್ಕೆ ತರಲಾಗಿದೆ. ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವ ದತ್ತಾಂಶಗಳ ಪರಿಶೀಲನೆ ನಡೆದಿದೆ. ಆ ಬಳಿಕ ಕಂಪನದ ತೀವ್ರತೆ ಗೊತ್ತಾಗಲಿದೆ. ಸದ್ಯಕ್ಕೆ ಜನರು ಆತಂಕಪಡುವ ಅಗತ್ಯ ಇಲ್ಲ’
ಎಂದು ತಿಳಿಸಲಾಗಿದೆ.
ಇದನ್ನು ಒದಿ : https://cnewstv.in/?p=10274
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೊಡಗು : ಒಂದು ವಾರದಲ್ಲಿ 3 ಬಾರಿ ಕಂಪಿಸಿದ ಭೂಮಿ. 2022-06-28
Recent Comments