Breaking News

ಮಹಾರಾಷ್ಟ್ರ : ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ. ???!!!

Cnewstv.in / 30.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಹಾರಾಷ್ಟ್ರ : ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ. ???!!!

ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರ ಕೊನೆಗೂ ಪತನವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ 3 ನೇ ಬಾರಿ ಸಿ.ಎಂ ಅಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮ ಮನೆ ಮಾಡಿದೆ. ಮುಂಬೈನಲ್ಲಿರುವ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬಿಜೆಪಿ ಶಾಸಕರು ಸೇರಿದಂತೆ ಹಲವು ಪಕ್ಷದ ಮುಖಂಡರು ಪರಸ್ಪರ ಶುಭಾಶಯ ಕೋರಿದರು.

ಕಳೆದ ಎರಡು ವರ್ಷಗಳಿಂದ ದೇವೇಂದ್ರ ಫಡ್ನವೀಸ್ ಯಾವಾಗಲಾದರೂ ಸದನಕ್ಕೆ ಮರಳಿಯೇ ಮರಳುತ್ತೇನೆ ಎಂಜು ಹೇಳುತ್ತಿದ್ದಾರೆ. ಅವರು ಮತ್ತೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬರುತ್ತಾರೆ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಹೇಳಿದ್ದಾರೆ. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಚಂದ್ರಕಾಂತ ಪಾಟೀಲ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಸಿಹಿ ತಿನ್ನಿಸಿದರು.

ಇಂದು ಮುಂಬೈನಲ್ಲಿ ಸಭೆ ಸೇರುವಂತೆ ಬಿಜೆಪಿ ತನ್ನ ಎಲ್ಲಾ ಶಾಸಕರನ್ನು ಕೇಳಿಕೊಂಡಿದೆ. ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮುಂದಿನ ಕ್ರಮವನ್ನು ನಿರ್ಧರಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು.

ನಿನ್ನೆ ಸಂಜೆ ಠಾಕ್ರೆ ಅವರು ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು,ರಾಜೀನಾಮೆ ಪತ್ರ ಅಂಗೀಕರಿಸಿದ ರಾಜ್ಯಪಾಲರು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಕೇಳಿಕೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=10309

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*