Breaking News

ಉದಯಪುರ ಘಟನೆ : ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ – ಸಚಿವ ಅರಗ ಜ್ಞಾನೇಂದ್ರ

Cnewstv.in / 30.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಉದಯಪುರ ಘಟನೆ : ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ – ಸಚಿವ ಆರಗ

ಬೆಂಗಳೂರು : ರಾಜಸ್ಥಾನದ ಉದಯಪುರದಲ್ಲಿ ನಡೆದ ಹೇಯ ಕೃತ್ಯಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ? ಒಂದು ವರ್ಗದ ಬಗ್ಗೆ ತೀವ್ರ ಕಿಡಿ ಮತ್ತೂಂದು ವರ್ಗದ ಮೇಲೆ ವಿಪರೀತ ಪ್ರೀತಿ. ಈ ಧೋರಣೆಗಳು ಸಮಾಜಕ್ಕೆ ತುಂಬಾ ಅಪಾಯಕಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುದ್ಧಿಜೀವಿಗಳು ಎನಿಸಿಕೊಂಡ ಬಹಳ ಜನ ಧಾರವಾಡದ ನುಗ್ಗಿಕೇರಿಯಲ್ಲಿ ಕಲ್ಲಂಗಡಿ ಒಡೆದು ಹಾಕಿದಾಗ ಮಾತನಾಡಿದರು. ಈಗ ಉದಯಪುರ ಹತ್ಯೆ ವಿಚಾರದಲ್ಲಿ ಅವರ ನಾಲಿಗೆಗೆ ಲಕ್ವ ಹೊಡೆದಿದೆಯೇ? ಈಗಲೂ ಮಾತನಾಡಬೇಕು ಅಲ್ಲವೇ? ಯಾವೊಂದು ವರ್ಗದ ವಿಚಾರ ಬಂದಾಗ ಖಂಡಿಸುವುದು, ಮತ್ತೂಂದು ವರ್ಗದ ವಿಚಾರದಲ್ಲಿ ಮೌನಕ್ಕೆ ಶರಣಾಗುವುದು. ಇದು ಎಷ್ಟು ಸರಿ? ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನು ಒದಿ : https://cnewstv.in/?p=10312

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*