Breaking News

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ.

Cnewstv.in / 1.7.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ.

ಕೊಡಗು : ಕಳೆದ ಕೆಲವು ದಿನಗಳಿಂದ ಕೊಡಗಿನ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಭೂಕಂಪವಾಗಿತ್ತು. ಇಂದು ಮತ್ತೆ ಭೂಮಿ ಕಂಪಿಸಿದ್ದು ಜನರಿಗೆ ಮತ್ತಷ್ಟು ಆತಂಕ ಮೂಡಿಸಿದೆ.

ಕೊಡಗು ಜಿಲ್ಲೆಯ ಗಡಿಭಾಗವಾದ ಚೆಂಬು ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಂಬು ಗ್ರಾಮದಿಂದ 5.2 ಕಿ.ಮೀ. ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಪುಣ್ಯ ಹತ್ತು ಕಿಲೋಮೀಟರ್ ಆಲದಲ್ಲಿ ರಿಕ್ಟರ್ ಮಾಪಕ 1.8 ರಷ್ಟು ಕಂಪನವಾಗಿದೆ.

ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿಲ್ಲ. ಒಂದು ವೇಳೆ ಭೂಮಿ ಬಿರುಕು ಕಂಡು ಬಂದರೆ ಕೂಡಲೇ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ 08272-221099, 221077 ಕರೆ ಮಾಡಿ ಮಾಹಿತಿ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.

ಇದನ್ನು ಒದಿ : https://cnewstv.in/?p=10317

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*