Cnewstv.in / 1.7.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ.
ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ (ನವೀಕರಣ-2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ಸಾಲಿನ 3ಕಂತು) ಯೋಜನೆಗಳಿಗೆ ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು ಹಾಗೂ ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಿಸಲಾಗುವುದು.
ಆಸಕ್ತರು suvidha.karnataka.gov.in ತಂತ್ರಾಂಶದ ಮೂಲಕ ಅರ್ಜಿಗಳನ್ನು ದಿ:12/08/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ಸಹಾಯವಾಣಿ ಸಂ.: 7026288888/ 08182-229634 ಹಾಗೂ ನಿಗಮದ ವೆಬ್‍ಸೈಟ್ http://upparadevelopment.karnataka.gov.in ನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=10322
C News TV Kannada News Online in cnewstv