Breaking News

ಹೈದರಾಬಾದ್‌ : 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

Cnewstv.in / 02.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹೈದರಾಬಾದ್‌ : ಬಹು ನಿರೀಕ್ಷಿತ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಹೈದರಾಬಾದ್‌ನಲ್ಲಿ ಇಂದು ಮತ್ತು ನಾಳೆ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಹತ್ವದ್ದಾಗಿದೆ.

2014ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಐದು ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ನವದೆಹಲಿಯಿಂದ ಹೊರತಾಗಿರುವ ನಗರದಲ್ಲಿ ಕಾರ್ಯಕಾರಿಣಿ ಆಯೋಜಿಸಲಾಗುತ್ತಿದೆ. ಶನಿವಾರ ಮಧ್ಯಾಹ್ನದ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ.

ಭಾನುವಾರ ಅದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಮೂಲಕ ಮುಕ್ತಾಯವಾಗಲಿದೆ. ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ಏಕನಾಥ ಶಿಂಧೆ ಬಣದ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದೂ ಕಾರ್ಯಕಾರಣಿಗೆ ಮಹತ್ವ ತಂದಿದೆ. ಬಿಜೆಪಿ ರಾಜ್ಯದ ಸಿಎಂಗಳು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ದಕ್ಷಿಣ ಭಾರತದಲ್ಲಿ ಪಕ್ಷದ ವಿಸ್ತರಣೆ ವಿಶೇಷವಾಗಿ ತೆಲಂಗಾಣದಲ್ಲಿ ಹಾಗೂ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳು ಇರುವುದರಿಂದ 2 ದಿನಗಳ ಸಭೆ ಮಹತ್ವದ್ದಾಗಿದೆ. ಜು.3ರಂದು ಕಾರ್ಯಕಾರಿಣಿ ಮುಕ್ತಾಯವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೃಹತ್‌ ಸಾರ್ವಜನಿಕ ಸಭೆ ನಡೆಯಲಿದೆ.

ಇದನ್ನು ಒದಿ : https://cnewstv.in/?p=10332

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*