Breaking News

ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ‌ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ.‌

Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ‌ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ.‌

ನವದೆಹಲಿ : ಖಾಸಗಿ ಶಾಲಾ ಬಸ್ ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ನಡೆದಿದೆ.

ಬಸ್ ಬೆಳಿಗ್ಗೆ 8.30 ರ ಸುಮಾರಿಗೆ ಸೈಂಜ್ ಪ್ರದೇಶಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಜಂಗ್ಲಾ ಗ್ರಾಮದ ಸಮೀಪ ಆಳವಾದ ಕಮರಿಗೆ ಬಿದ್ದಿರುವುದಾಗಿ ಕುಲ್ಲು ಡೆಪ್ಯುಟಿ ಕಮಿಷನರ್ ಅಶುತೋಷ್ ಗರ್ಗ್ ತಿಳಿಸಿದ್ದಾರೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಬಸ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 45 ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಕಂದಕಕ್ಕೆ ಬಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ.

ಇನ್ನೂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ರೂ. ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಇದನ್ನು ಒದಿ : https://cnewstv.in/?p=10340

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*