ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.
ಶಿವಮೊಗ್ಗ : ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕ ರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಿದ್ದು ವಿಪತ್ತುಗಳು ಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆಎನ್‍ಎನ್‍ಸಿಇ ಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಮಾಜಿ ಸೈನಿಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಜುಲೈ 08 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಶಿವಮೊಗ್ಗ ಕಚೇರಿಯ 08182-220925 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು(ಪ್ರಭಾರ) ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=10352
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ. 2022-07-04