Breaking News

ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಸಕ ಜಮೀರ್ ಅಹ್ಮದ್ ಖಾನ್  ಮನೆ‌ ಸೇರಿದಂತೆ 5 ಕಡೆ ಎಸಿಬಿ ದಾಳಿ.

ಬೆಂಗಳೂರು : ಇಂದು ಬೆಳಂಬೆಳಗ್ಗೆ ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರ ಮನೆ ಸೇರಿದಂತೆ ಅವರಿಗೆ ಸೇರಿದ ಪ್ರಮುಖ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸಿಬಿ ಅಧಿಕಾರಿಗಳು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್‌, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್‌, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.

ಸುಮಾರು 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಎಸ್ ಪಿ ಯತೀಶ್ ಚಂದ್ರ ಅವರ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ದಾಳಿ ಹಿನ್ನೆಲೆ ಶಾಸಕರ ನಿವಾಸ, ಕಚೇರಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನು ಒದಿ : https://cnewstv.in/?p=10264

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*