Breaking News

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ, 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ಹಂತಕರು.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ, 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ಹಂತಕರು.

ಬೆಂಗಳೂರು : ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ಇಂದು ಮಧ್ಯಾಹ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಹಂತಕರು ಈ ಕೃತ್ಯವನ್ನು ನಡೆಸಿದ್ದಾರೆ. ಜುಲೈ 2ರಿಂದ ಅದೇ ಹೋಟೆಲ್ ನಲ್ಲಿ ಇದ್ದ ಚಂದ್ರಶೇಖರ ಗುರುಗಳು ಇಂದು ರೂಮ್ ಖಾಲಿ ಮಾಡಬೇಕಿತ್ತು.

ಹೋಟೆಲ್‌ ರಿಸೆಪ್ಷನ್ ನಲ್ಲಿ ಗುರುಗಳಿಗೆ ಕಾಲಿಗೆ ಬೀಳುವ ನೆಪದಲ್ಲಿ ಬಂದಂತಹ ಹಂತಕರು ಚಂದ್ರಶೇಖರ್ ಗುರೂಜಿ ಗೆ 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿದ್ದಾರೆ. ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಲಾಬೂರಾಮ್ ಭೇಟಿ ನೀಡಿದ್ದಾರೆ. ಈ ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

ಇದನ್ನು ಒದಿ : https://cnewstv.in/?p=10267

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*