Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪ್ರವಾಸಕ್ಕೆಂದು ಬಂದ ಮಹಿಳೆ ಕಾಲು ಜಾರಿ ಬಿದ್ದು ಸಾವು
ಶಿವಮೊಗ್ಗ : ಜೋಗ ವೀಕ್ಷಣೆಗೆಂದು ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ನಿಶಾ (24) ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆ ನಿಶಾ ಹಾಗೂ ನಾಗೇಶ್ ಜೊತೆ ಮದುವೆಯಾಗಿತ್ತು. ಇಂದು ಇಬ್ಬರು ದಂಪತಿಗಳು ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನಲ್ಲಿ ವೀಕ್ಷಣೆಗೆಂದು ಹೋದಾಗ ನಿಶಾ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ನಿಶಾ ಕುಟುಂಬದವರು ಈ ಸಾವಿನ ಬಗ್ಗೆ ಅನುಮಾನವನ್ನ ವ್ಯಕ್ತಪಡಿಸಿದ್ದು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=10371
C News TV Kannada News Online in cnewstv