Breaking News

ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ.

ನವದೆಹಲಿ : ಗೃಹ ಬಳಕೆ ಅಡುಗೆ ಅನಿಲದ ಬೆಲೆ ಮತ್ತೆ ಏರಿಕೆಯಾಗಿದೆ.

14.2 kg ತೂಕದ ಗೃಹಬಳಕೆಯ ಅಡುಗೆ ಅನಿಲದ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದೆ.

ದೇಶದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ದರ ಇಂದಿನಿಂದ ಜಾರಿಯಾಗಲಿದ್ದು, ರಾಷ್ಟ್ರರಾಜಧಾನಿಯಲ್ಲಿ 14.2 kg ತೂಕದ ಅಡುಗೆ ಅನಿಲದ ದರ 1,053 ರೂಪಾಯಿ ಆಗಿದ್ದು, ಬೆಂಗಳೂರಿನಲ್ಲಿ 1055 ರೂಪಾಯಿ. ಮುಂಬೈನಲ್ಲಿ 1,052 ರೂಪಾಯಿ. ಚೆನ್ನೈನಲ್ಲಿ 1,068 ರೂಪಾಯಿ. ಕೊಲ್ಕತ್ತಾದಲ್ಲಿ 1,068 ರೂಪಾಯಿಯಾಗಿದೆ.

ಇದೇ ವೇಳೆ 5ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ ಕೂಡಾ ಪರಿಷ್ಕರಿಸಲಾಗಿದ್ದು, 18 ರು ಏರಿಕೆ ಕಂಡಿದೆ. 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ದರ 8.5 ರು ಪ್ರತಿ ಸಿಲಿಂಡರ್ ನಂತೆ ಇಳಿಕೆಯಾಗಿದೆ.

ಇದನ್ನು ಒದಿ : https://cnewstv.in/?p=10391

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*