ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಮಾಯ. ಕಳ್ಳತನದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಮಾಯ. ಕಳ್ಳತನದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ.
ಶಿವಮೊಗ್ಗ : ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಕದಿಮರು ಕಳ್ಳತನ ಮಾಡಿದ್ದು, ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ರೀನಗರದ 8ನೇ ವಾರ್ಡಿನಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಉಮೇಶ್ ಪಂಡಿತ್ ರವರ ಮನೆಯ ಮುಂದೆ ನಿಲ್ಲಿಸಿದ್ದ ಓಮಿನಿ ಕಾರನ್ನು ( KA 25 N 0561) ತಡರಾತ್ರಿ 3.30 ರ ಸಮಯಕ್ಕೆ ಕಳ್ಳತನ ಮಾಡಿದ್ದಾರೆ.
ಕಳ್ಳರ ಕೈಚಳಕ ದೃಶ್ಯಗಳು ಹತ್ತಿರದ ನಿವಾಸಿಯೊಬ್ಬರ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ