Breaking News

ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.

Cnewstv.in / 08.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.

ಬೆಂಗಳೂರು : ತಮಿಳಿನ ಖ್ಯಾತ ನಟ ವಿಕ್ರಮ್ ರವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ವಿಕ್ರಮ್ ರವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು, ಸಂಜೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

56 ವರ್ಷದ ವಿಕ್ರಮ್ ಫಿಟ್ ನೆಸ್ ಗೆ ಮಹತ್ವ ನೀಡುತ್ತಿದ್ದರು.‌ ಫಿಟ್ ಅಂಡ್ ಫೈನ್ ಆಗಿದ್ದರು. ಆದರೆ ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತವಾಗಿತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು.

ಪ್ರಸ್ತುತ ಹಲವು ಪ್ರಾಜೆಕ್ಟ್ ಗಳಲ್ಲಿ ವಿಕ್ರಮ್ ಅವರು ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಪೊನ್ನಿಯಿನ್ ಸೆಲ್ವನ್ ’ ಮತ್ತು ‘ಕೋಬ್ರಾ’ ಸಿನಿಮಾಗಳು ಹೆಚ್ಚು ನಿರೀಕ್ಷೆ ಮೂಡಿಸಿವೆ.
ಇಂದು ಸಂಜೆ 6 ಗಂಟೆಗೆ ವಿಕ್ರಂ ತಮ್ಮ ಚಿತ್ರ ಪೊನ್ನಿಯಿನ್ ಸೆಲ್ವನ್ ನ ಟ್ರೇಲರ್ ಲಾಂಚ್ ಮಾಡಬೇಕಿತ್ತು. ಆದರೆ ಅಷ್ಟರಲ್ಲೇ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ.

ವಿಕ್ರಮ್ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿದ್ದರು. ತೆಲುಗು, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸುವ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ರಾಷ್ಟ್ರಪ್ರಶಸ್ತಿ, ಏಳು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ, ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ, ಕಲೈಮಣಿ ಪ್ರಶಸ್ತಿ ಪಡೆದಿದ್ದಾರೆ.

ಇದನ್ನು ಒದಿ : https://cnewstv.in/?p=10427

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*