Cnewstv.in / 09.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಸ್ತೆ ಮಧ್ಯೆ ಸಿಲೆಂಡರ್ ಗೆ ಪೂಜೆ..
ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ.
ಶಿವಮೊಗ್ಗ : ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಗ್ಯಾಸ್ ಸಿಲೆಂಡರ್ ಗೆ ಪೂಜೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ಮಾಡಿದರು.
ಈಗಾಗಲೇ ಜನರು ಬೆಲೆಏರಿಕೆಯಿಂದ ತತ್ತರಿಸುತ್ತಿದ್ದಾರೆ. ಮತ್ತೆ ಸಿಲೆಂಡರ್ ನ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದ ಇರುವ ಬಿಜೆಪಿ ಸರ್ಕಾರದ ವಿರುದ್ಧ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜನಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವ ಬಿಜೆಪಿ ಸರ್ಕಾರವನ್ನ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್. ಪಿ ಗಿರೀಶ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಕೆ ರಂಗನಾಥ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಕುಮರೇಶ್, ನಿತಿನ್, ಲೋಕೇಶ್, ಸೇರಿದಂತೆ ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು