Breaking News

ಸಿದ್ದರಾಮೋತ್ಸವದ ಪೂರ್ವಭಾವಿ ಸಭೆ.

Cnewstv.in / 13.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿದ್ದರಾಮೋತ್ಸವದ ಪೂರ್ವಭಾವಿ ಸಭೆ.

ಬೆಂಗಳೂರು : ಸಿದ್ದರಾಮೋತ್ಸವ ಕಾರ್ಯಕ್ರಮ ಕುರಿತು ಇಂದು ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ ನಡೆಯುತ್ತಿದೆ.

ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಮೃತಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರ ಪೂರ್ವಭಾವಿ ಸಭೆಯನ್ನು ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ ನಲ್ಲಿ ನಡೆಯುತ್ತಿದೆ.

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದ್ದು ಇದಕ್ಕಾಗಿ ಅಭಿಮಾನಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯನವರ ಹೊಸಅಲೆ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ್, ಜಿ ಪರಮೇಶ್ವರ್, ಯು.ಟಿ ಖಾದರ್ ಸೇರಿದಂತೆ ಹಲವಾರು ನಾಯಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=10474

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*