Breaking News

18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್.‌

Cnewstv.in / 13.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್.‌

ನವದೆಹಲಿ : ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಜುಲೈ 15 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಲಸಿಕಾ ಕೇಂದ್ರಗಳಲ್ಲಿ ಮುಂದಿನ 75 ದಿನಗಳ ಕಾಲ ವಿಶೇಷ ಅಭಿಯಾನದಡಿಯಲ್ಲಿ ಉಚಿತ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ 18 ರಿಂದ 59 ವಯೋಮಾನದ 77 ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ನೀಡುವ ಗುರಿಯನ್ನು ಹೊಂದಿದೆ.

ಈಗಾಗಲೇ ದೇಶದಲ್ಲಿ ಗರಿಷ್ಠ ಪ್ರಮಾಣದ ಜನರು 9 ತಿಂಗಳ ಹಿಂದೆಯೇ ಎರಡನೇ ಡೋಸ್ ಪಡೆದಿದ್ದಾರೆ. ಈ ಬೂಸ್ಟರ್ ಡೋಸ್ ಪಡೆಯುವುದರಿಂದ ಮತ್ತಷ್ಟು ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=10477

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*