Breaking News

ನಾಲ್ವರು ಪೊಲೀಸ್ ಅಧೀಕ್ಷಕರ ವರ್ಗಾವಣೆ

Cnewstv.in / 13.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಲ್ವರು ಪೊಲೀಸ್ ಅಧೀಕ್ಷಕರ ವರ್ಗಾವಣೆ

ಬೆಂಗಳೂರು : ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಎಂ ಎಲ್ ಪುರುಷೋತ್ತಮ್ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿದೆ.

ಕರ್ನಾಟಕ ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಎಂ ಎಲ್ ಪುರುಷೋತ್ತಮ್ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿದೆ.

ಹಾಸನ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಬಿ.ಎನ್.ನಂದಿನಿ ಅವರನ್ನು ಮೈಸೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಮೈಸೂರು ಜಿಲ್ಲೆಯ ಹೆಚ್ಚು ಪೊಲೀಸ್ ಅಧೀಕ್ಷಕರಾಗಿದ್ದ ಆರ್.ಶಿವಕುಮಾರ್ ಅವರನ್ನು ರಾಯಚೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮತ್ತೊಂದೆಡೆ ಈ ಮೇಲ್ಕಂಡ ವರ್ಗಾವಣೆ ಆದೇಶದಿಂದಾಗಿ ಸ್ಥಳ ನಿರೀಕ್ಷೆಯಲ್ಲಿರುವ ಇ.ಎಸ್.ವೀರಭದ್ರಯ್ಯ ಎಸ್ ಪಿ (ನಾನ್ ಐಪಿಎಸ್) ರವರು ಮುಂದಿನ ಸ್ಥಳ ನಿಯುಕ್ತಿಗಾಗಿ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ. ಈ ಮೇಲ್ಕಂಡ ಎಲ್ಲ ಅಧಿಕಾರಿಗಳನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ಕೂಡಲೇ ಬಿಡುಗಡೆಗೊಳಿಸಿ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲು ಸೂಚಿಸಲಾಗಿದೆ.

ಇದನ್ನು ಒದಿ : https://cnewstv.in/?p=10482

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*