Breaking News

ತುಂಬಿದ ಭದ್ರಾ. ಜಲಾಶಯದಿಂದ ನದಿಗೆ ನೀರು ಬಿಡುಗಡೆ.

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತುಂಬಿದ ಭದ್ರಾ. ಜಲಾಶಯದಿಂದ ನದಿಗೆ ನೀರು ಬಿಡುಗಡೆ.

ಶಿವಮೊಗ್ಗ : ನಿರಂತರ ಮಳೆಯಿಂದಾಗಿ ಭದ್ರಾ ಜಲಾಶಯ ಭರ್ತಿ ಆಗಿದ್ದು, ಜಲಾಶಯದ 4 ಕ್ರಸ್ಟ್ ಗೇಟ್ ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.

ಜಲಾಶಯದ ಒಳ ಮತ್ತು ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇಂದು ಜಲಾಶಯದಿಂದ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ.‌ ಪ್ರಸುತ್ತ 183.2 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, 43,051 ಸಾವಿರ ಕ್ಯೂಸೆಕ್ಸ್ ನಷ್ಟು ಒಳ ಹರಿವಿದೆ.

https://youtu.be/BQ9QDnzOEX8

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯನವರು ಸಂಪ್ರದಾಯದಂತೆ ಈ ಬಾರಿಯೂ ಸಹ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಂತರ ಮಾತನಾಡಿದ ಅವರು ಕಾಡ ಇತಿಹಾಸದಲ್ಲಿ ಮಳೆಗಾಲದ ಸಮಯದಲ್ಲಿ ಇದೇ ಮೊದಲ ಬಾರಿಗೆ ಜುಲೈ 15ರ ಒಳಗಾಗಿ ಜಲಾಶಯ ಭರ್ತಿಯಾಗಿದ್ದು, ತುಂಬಾ ಸಂತೋಷವಾಗಿದೆ ಎಂದರು.

ಇದನ್ನು ಒದಿ : https://cnewstv.in/?p=10490

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*