ರೆಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭಾರಿ ಅಕ್ರಮವಾಗಿದೆ..ಯುಪಿಎ ಸರ್ಕಾರದ ಅವಧಿಯಲ್ಲಿ 66,300 ಕೋಟಿಗೆ 126 ಯುದ್ದ ವಿಮಾನಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಮೋದಿ ಸರ್ಕಾರ 36 ವಿಮಾನಗಳನ್ನು 58,300 ಕೋಟಿಗೆ ಖರೀದಿಸಲು ಮುಂದಾಗಿದೆ ಎಂದು ಆರೋಪಿಸಿದರು.ಕೇಂದ್ರ ಬಿ.ಜೆ.ಪಿ ನಡೆಸಿರುವ ಸಾವಿರಾರು ಕೋಟಿ ರೂಪಾಯಿಗಳು ಅಕ್ರಮವನ್ನು ತನಿಖೆಗೆ ಒಳಪಡಿಸಬೇಕು ಹಾಗು ಎಲ್ಲಾ ಎಲ್ಲಾ ತಪ್ಪಿತಸ್ಥರಿಗೂ ಕ್ರಮ ಜರುಗಿಸಬೇಂದು ಇದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡಿದರು.. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಶಿ ವಿಶ್ವನಾಥ್, ನಾಗರಾಜ್, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಧುಸೂದನ್, ಪ್ರಮುಖರಾದ ಮಹಮ್ಮದ್ ಆರೀಫುಲ್ಲಾ, ಮುಜೀಬುಲ್ಲಾ, ಚೇತನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.
![](https://cnewstv.in/wp-content/uploads/2018/10/WhatsApp-Image-2018-10-02-at-4.50.48-PM-620x330.jpeg)
Recent Comments