Breaking News

ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್.

Cnewstv.in / 15.07.2022 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್.

ಬೆಂಗಳೂರು : ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಲಿದೆ.

ಹಿರಿಯ ನಟ ಅನಂತನಾಗ್,ಪಂಡಿತ್ ಬಾಳೇಶ್ ಭಜಂತ್ರಿ, ಇಂಜಿನಿಯರ್ ಶರತ್ ಶರ್ಮ ರವರಿಗೆ ಇಂದು ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ವಿಶ್ವವಿದ್ಯಾನಿಲಯದ ಎರಡನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಹಾಗೂ ಪದವಿ ಪ್ರದಾನ ಮಾಡಲಿದ್ದಾರೆ.

ಅನಂತನಾಗ್ 

ರಂಗಭೂಮಿ ಕಲಾವಿದರು. ಹಿಂದಿ, ಕನ್ನಡ, ಮಲಯಾಳಂ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ದಕ್ಷಿಣ ಭಾರತದ ಖ್ಯಾತ ನಟ. ರಾಜಕುಮಾರ ಅಂಬರೀಶ್ ವಿಷ್ಣುವರ್ಧನ್ ಸೇರಿದಂತೆ ಅನೇಕ ಹಿರಿಯ ನಟರೊಂದಿಗೆ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೆ ಕಿರುತೆರೆಯಲ್ಲೂ ಸಹ ಕಾಣಿಸಿಕೊಂಡ ಹೆಗ್ಗಳಿಕೆ ಹೊಂದಿರುವ ನಟ ಅನಂತನಾಗ್.

ಬಾಳೇಶ್ ಭಜಂತ್ರಿ,

ಹೆಸರಾಂತ ಶಹನಾಯಿ ಸಂಯೋಜಕರು.‌ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಸಂಯೋಜನೆ ಮಾಡಿದ್ದಾರೆ. ಅವರಿಗೆ ಪದ್ಮಶ್ರೀ ಪುರಸ್ಕಾರ ಕೂಡ ಲಭಿಸಿದೆ. ಸಂಗೀತ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆ ಅಪಾರ. ಬಿಸ್ಮಿಲ್ಲಾ ಖಾನ್ ಅವರ ಶಿಷ್ಯರಾಗಿ 40 ವರ್ಷಗಳ ಕಾಲ ಅವರೊಂದಿಗೆ ಶಹನಾಯಿ ನುಡಿಸಿದ ಹೆಗ್ಗಳಿಕೆ ಇವರಿಗಿದೆ.

ಶರತ್ ಶರ್ಮ.

ಯುಪಿಐ ಡಿಜಿಟಲ್ ಪೇಮೆಂಟ್ ಸೂತ್ರಧಾರಿಯಾಗಿರುವ ಇವರು, ಬೆಂಗಳೂರಿನ ಪ್ರತಿಷ್ಠಿತ ಐ ಸ್ಪಿಟ್ ಸಾಫ್ಟ್ವೇರ್ ಕಂಪನಿಯ ಸಹ ಸಂಪಾದಕರಾಗಿದ್ದಾರೆ. ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.

ಇದನ್ನು ಒದಿ : https://cnewstv.in/?p=10510

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*