ಸರ್ಕಾರಿ ಕಚೇರಿಯಲ್ಲಿ ಇನ್ನೂ ಮುಂದೆ ಫೋಟೋ ವಿಡಿಯೋ ಚಿತ್ರೀಕರಣ ಬಂದ್.
Cnewstv.in / 15.07.2022 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸರ್ಕಾರಿ ಕಚೇರಿಯಲ್ಲಿ ಇನ್ನೂ ಮುಂದೆ ಫೋಟೋ ವಿಡಿಯೋ ಚಿತ್ರೀಕರಣ ಬಂದ್.
ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಇನ್ನುಮುಂದೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂಬ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ವೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಹಾಗೂ ಇಂತಹ ವೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ ಸರ್ಕಾರದ ಘನತೆಗೆ ಕುಂದುಂಗುತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ನಿಷೇಧಿಸುವ/ನಿರ್ಬಂಧಿಸುವ ಕುರಿತು ಮನವಿ ಮಾಡಿದರು.
ಈ ಕುರಿತು ಸರ್ಕಾರವು ಕೂಲಂಕುಷವಾಗಿ ಗಮನಹರಿಸಿದ್ದು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ನಿರ್ಬಂಧಿಸುವುದು ಅವಶ್ಯಕವಾಗಿರುತ್ತದೆಂದು ಅಭಿಪ್ರಾಯಪಟ್ಟು ಈ ಆದೇಶವನ್ನು ಹೊರಡಿಸಿದೆ.
ಇದನ್ನು ಒದಿ : https://cnewstv.in/?p=10510
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸರ್ಕಾರಿ ಕಚೇರಿಯಲ್ಲಿ ಇನ್ನೂ ಮುಂದೆ ಫೋಟೋ ವಿಡಿಯೋ ಚಿತ್ರೀಕರಣ ಬಂದ್. 2022-07-15